ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಆಂಧ್ರ ಮೂಲದ ಶಫಿ(55), ಶಮಾ(50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದ ಕಾರು ಲಕ್ಷ್ಮೀಪುರ ಕ್ರಾಸ್ ಬಳಿ 20ರಿಂದ 25 ಅಡಿ ಹಳ್ಳಕ್ಕೆ ಬಿದ್ದಿದೆ. ಏರ್ ಪೋರ್ಟ್ ನಲ್ಲಿ ಮಗಳನ್ನ ಬಿಟ್ಟು ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ.
ಅಪಘಾತ ಸ್ಥಳಕ್ಕೆ ಗೌನಿಪಲ್ಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


