ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ, ಕೊಳ್ಳೇಗಾಲದ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಶಾಸಕರ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಕಾರು ರಸ್ತೆಯ ಬದಿಗೆ ನುಗ್ಗಿ, ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


