21 ವರ್ಷಗಳ ನಂತರ ಕೊಲ್ಲೂರಿನಲ್ಲಿ ಬ್ರಹ್ಮರಥೋತ್ಸವ ಜರುಗಲಿದ್ದು. ಆದ್ದರಿಂದ ಭಕ್ತರಿಗೆ ಮೇ ತಿಂಗಳಿನಲ್ಲಿ ಎರಡು ದಿನಗಳ ಕಾಲ ಕೊಲ್ಲೂರು ಮೂಕಾಂಬಿಕೆಯ ದರ್ಶನ ಇರುವುದಿಲ್ಲ.
ಕರ್ನಾಟಕವೊಂದೇ ಅಲ್ಲದೇ, ದೇಶದಲ್ಲೇ ಅತ್ಯಂತ ಪ್ರಸಿದ್ಧಿ ಗಳಿಸಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಭಕ್ತರಿಗೆ ಮಹತ್ವದ ಸುದ್ದಿಯೊಂದು ದೇವಾಲಯದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖವಾದ ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ಕರಾವಳಿಯ ಪ್ರಮುಖ ದೇವಾಲಯವಾದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ.
ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಭಕ್ತರು ವಿವಿಧ ಬೇರೆ ಬೇರೆ ರಾಜ್ಯ ಗಳಿಂದ ಆಗಮಿಸಿ ದೇವಿಯ ದರ್ಶನ ಭಾಗ್ಯ ಪಡೆಯುತ್ತಿದ್ದಾರೆ.
ಕೊಲ್ಲೂರು ಮೂಕಾಂಬಿಕೆ ದೇಗುಲದಲ್ಲಿ ಏಪ್ರಿಲ್ 30ರಿಂದ ಮೇ 11ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಬರೋಬ್ಬರಿ 21 ವರ್ಷಗಳ ನಂತರ ಕೊಲ್ಲೂರಿನಲ್ಲಿ ಬ್ರಹ್ಮರಥೋತ್ಸವ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖವಾದ ಸೂಚನೆ ನೀಡಿದೆ.
ಮೇ 1ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಪೀಠದ ಚಲನೆ ನಡೆಯಲಿದ್ದು. ಹೀಗಾಗಿ ಮೇ 1 ರಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಭಾಗ್ಯ ಭಕ್ತರಿಗೆ ಲಭಿಸುವುದಿಲ್ಲ ಎಂದು ಆಡಳಿತ ಮಂಡಳಿ ವರದಿ ನೀಡಿದೆ.
ಅಷ್ಟೇ ಅಲ್ಲದೇ, ಮೇ ತಿಂಗಳ 3ನೇ ತಾರೀಖಿನಂದು ಸಹ ಭಕ್ತರಿಗೆ ಕೊಲ್ಲೂರು ದೇವಿಯ ದರ್ಶನಕ್ಕೆ ಅವಕಾಶ ಸಿಗುವುದಿಲ್ಲ ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


