nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ:ಹೆಚ್.ಡಿ ಕುಮಾರಸ್ವಾಮಿ
    ರಾಜ್ಯ ಸುದ್ದಿ March 14, 2023

    ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ:ಹೆಚ್.ಡಿ ಕುಮಾರಸ್ವಾಮಿ

    By adminMarch 14, 2023No Comments2 Mins Read
    kumaraswami

    Provided by
    Provided by

    ಪ್ರಧಾನಿ ಮೋದಿ ಮಂಡ್ಯ ಭೇಟಿ ವೇಳೆ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರ ನಿರ್ಮಿಸಿ ನಂತರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೆ ಅದನ್ನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಹೆಚ್.ಡಿ ಕುಮಾರಸ್ವಾಮಿ, ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ಕಟು ಟೀಕೆ ಮಾಡಿದ್ದಾರೆ.

    ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂಧ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ.

    ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಹೆಚ್,ಡಿಕೆ ಕಿಡಿಕಾರಿದ್ದಾರೆ.


    Provided by
    Provided by

    ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ.

    ಇಂತಹ ಲಜ್ಜಗೇಡಿ ನಡೆ ರಾಜ್ಯ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ.ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

    ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.

    ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ರಾಜ್ಯ ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೆಚ್.ಡಿಕೆ ಎಚ್ಚರಿಕೆ ನೀಡಿದರು.

    ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ.

    ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದರು.

    ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ, ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ರಾಜ್ಯ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ ಎಂದು ಹೆಚ್.ಡಿಕೆ ಗುಡುಗಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.