ರಿಪ್ಪನ್ಪೇಟೆ: ಸಮೀಪದ ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಜನವರಿ 20 ರಂದು ಧನುರ್ಮಾಸದ ಅಂಗವಾಗಿ ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮೀಜಿಯವರು ಲೋಕಕಲ್ಯಾಣಾರ್ಥ ಶಿವಪೂಜಾನುಷ್ಟಾನ ಮತ್ತು ಧರ್ಮಜಾಗೃತಿ ಕಾರ್ಯಕ್ರಮವನ್ನು ಜನವರಿ 20 ರಂದು ಏರ್ಪಡಿಸಿದ್ದಾರೆಂದು ಮಠದ ಪ್ರಕಟಣೆ ತಿಳಿಸಿದೆ.
ಧರ್ಮ ಸಮಾರಂಭದ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ವಹಿಸಿ ಅಶೀರ್ವಚನ ನೀಡುವರು.
ಹೊನ್ನಾಳಿ ಹೀರೆಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ಧರ್ಮಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.
ಶ್ರೀಶಿವಲಿಂಗೇಶ್ವರ ತೂಗು ಪಂಚಾಂಗವನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಹರತಾಳು ಹಾಲಪ್ಪ, ರುದ್ರೇಗೌಡ, ಆರ್.ಎಂ.ಮಂಜುನಾಥ, ಉದ್ಯಮಿ ಕೆ.ಆರ್.ಪ್ರಕಾಶ್, ಕೋಣಂದೂರು ಜಿ.ಪಂ.ಮಾಜಿ ಸದಸ್ಯೆ ಅಪೂರ್ವ ಶರಥಿ ಪೂರ್ಣೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಾಂತಮ್ಮ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ನಾಡಿನ ವಿವಿಧ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆಂದು ಮಠದ ಪೀಠಾಧ್ಯಕ್ಷರಾದ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


