nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊನೆ ಯತ್ನದವರೆಗೂ ಛಲಬಿಡದೆ ಐಎಎಸ್ ಅಧಿಕಾರಿಯಾದ ನಮಿತಾ ಶರ್ಮಾ
    Uncategorized May 4, 2022

    ಕೊನೆ ಯತ್ನದವರೆಗೂ ಛಲಬಿಡದೆ ಐಎಎಸ್ ಅಧಿಕಾರಿಯಾದ ನಮಿತಾ ಶರ್ಮಾ

    By adminMay 4, 2022No Comments2 Mins Read
    dehil

    ನವದೆಹಲಿ: ಒಬ್ಬ ವ್ಯಕ್ತಿ ಗುರಿ ಸಾಧಿಸಲು ನಿರ್ಧರಿಸಿದರೆ ಕಠಿಣ ಪರಿಶ್ರಮ ಪಡಲೇಬೇಕು. ಪ್ರತಿ ವರ್ಷ ಅನೇಕ ಅಭ್ಯರ್ಥಿಗಳು UPSCಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಅವರು ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗುತ್ತಾರೆ. ಇಂದು ನಾವು ನಿಮಗೆ ಐಎಎಸ್ ಅಧಿಕಾರಿ ನಮಿತಾ ಶರ್ಮಾರ ಯಶಸ್ವಿ ಕಥೆಯನ್ನು ಹೇಳುತ್ತಿದ್ದೇವೆ. ಯುಪಿಎಸ್‌ಸಿಯಲ್ಲಿ ಅವರ ಪ್ರಯಾಣ ಸಾಕಷ್ಟು ಹೋರಾಟದಿಂದ ಕೂಡಿತ್ತು. ಅನೇಕ ಬಾರಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ವೈಫಲ್ಯ ಎದುರಿಸಿದ್ರೂ ಅವರು ಎದೆಗುಂದಲಿಲ್ಲ. ಛಲಬಿಡದೆ ತಮ್ಮ ಗುರಿ ಸಾಧಿಸಿದ ಅವರ ಕಥೆ ಎಲ್ಲರಿಗೂ ಸ್ಪೂರ್ತಿಯಾಗಿದೆ.

    UPSC ಜರ್ನಿ ತುಂಬಾ ಸವಾಲಿನದ್ದಾಗಿತ್ತು


    Provided by
    Provided by

    ನಮಿತಾ ಶರ್ಮಾರ ಯುಪಿಎಸ್‌ಸಿ ಪ್ರಯಾಣವು ತುಂಬಾ ಸವಾಲಿನದ್ದಾಗಿತ್ತು. ಇದರಲ್ಲಿ ಅವರು ಅನೇಕ ಬಾರಿ ವಿಫಲರಾಗಬೇಕಾಯಿತು. ನಾಗರೀಕ ಸೇವೆಯಲ್ಲಿ ನಮಿತಾ 5 ಬಾರಿ ಫೇಲ್ ಆಗಿದ್ದು ಗೊತ್ತಾದ್ರೆ ಆಶ್ಚರ್ಯ ಆಗುತ್ತೆ. ಎಷ್ಟೋ ಬಾರಿ ಫೇಲ್ ಆದ ನಂತರ ಹೆಚ್ಚಿನವರು ಭರವಸೆಯನ್ನೇ ಕಳೆದುಕೊಂಡುಬಿಡುತ್ತಾರೆ. ಆದರೆ, ನಮಿತಾ ಅವರು ಐಎಎಸ್ ಅಧಿಕಾರಿಯಾಗಲೇಬೇಕೆಂದು ನಿರ್ಧರಿಸಿದ್ದರು. ಈ ಉತ್ಸಾಹವೇ ಅವರಿಗೆ ದೊಡ್ಡ ಶಕ್ತಿ ನೀಡಿತ್ತು ಮತ್ತು ನಿರಂತರವಾಗಿ ಶ್ರಮಿಸಲು ಪ್ರೇರಣೆಯಾಯಿತು. 7 ವರ್ಷಗಳ ನಂತರ ಅವರು ಕಠಿಣ ಪರಿಶ್ರಮದ ಫಲ ಪಡೆದರು. ಯಶಸ್ಸು ಸಾಧಿಸುವ ಮೂಲಕ ಯುಪಿಎಸ್‍ಸಿ ಆಕಾಂಕ್ಷಿಗಳಿಗೆ ಪ್ರೇರಣೆಯಾದರು. ಈ ಹೋರಾಟದ ಪಯಣದಲ್ಲಿ ಅವರು ತಾಳ್ಮೆಯನ್ನೇ ದೊಡ್ಡ ಅಸ್ತ್ರವನ್ನಾಗಿಸಿಕೊಂಡಿದ್ದರು.
    ಅಭ್ಯರ್ಥಿಗಳಿಗೆ ನಮಿತಾ ಶರ್ಮಾ ಸಲಹೆ

    ಭಾರತದಲ್ಲಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗುವುದು ಲಕ್ಷಾಂತರ ಅಭ್ಯರ್ಥಿಗಳ ಕನಸಾಗಿರುತ್ತದೆ. ಇಂತಹ ಅಭ್ಯರ್ಥಿಗಳಿಗೆ ನಮಿತಾ ಶರ್ಮಾ ಯಶಸ್ಸಿನ ಸೂತ್ರವನ್ನು ತಿಳಿಸಿದ್ದಾರೆ. ಎಲ್ಲಕ್ಕಿಂತ ಮೊದಲು ನೀವು ಉತ್ತಮ ತಂತ್ರಗಾರಿಕೆಯೊಂದಿಗೆ ತಯಾರಿ ಮಾಡಿಕೊಳ್ಳಬೇಕು ಎಂದು ನಮಿತಾ ಹೇಳುತ್ತಾರೆ. ಸಮಯ ನಿರ್ವಹಣೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ವೇಳಾಪಟ್ಟಿಯ ಪ್ರಕಾರ ನಿಮ್ಮ ತಂತ್ರವನ್ನು ಕಾರ್ಯಗತಗೊಳಿಸಿ. ಕೆಲವೊಮ್ಮೆ ಇಲ್ಲಿ ನೀವು ಅನೇಕ ವರ್ಷಗಳವರೆಗೆ ವೈಫಲ್ಯಗಳನ್ನು ಎದುರಿಸಬೇಕಾಗುತ್ತದೆ. ಆದರೆ ಭಯಪಡುವ ಅಗತ್ಯವಿಲ್ಲ. ಪ್ರತಿ ಬಾರಿಯೂ ದುಪ್ಪಟ್ಟು ಉತ್ಸಾಹದಿಂದ ತಯಾರಿ ನಡೆಸಿ ಪರೀಕ್ಷೆಗೆ ಹಾಜರಾಗಬೇಕು. ಕೊನೆ ಯತ್ನದವರೆಗೂ ಭರವಸೆ ಬಿಟ್ಟುಕೊಡದೆ ನಿಮ್ಮೆಲ್ಲ ಶ್ರಮದಿಂದ ಪ್ರಯತ್ನ ಮಾಡುತ್ತಿರಬೇಕು. ಪಾಸಿಟಿವ್ ಮನೋಭಾವ ಇದ್ದರೆ ಜಗತ್ತಿನಲ್ಲಿ ಏನು ಬೇಕಾದರೂ ಮಾಡಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.