ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್‌ನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೋಲಿಸರು ಹುಡುಕಾಟ ನಡೆಸುತ್ತಿದ್ದ ವೇಳೆ ಆರೋಪಿಯು ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದನು. ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿತ್ತು.
ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆಸಿಡ್ ದಾಳಿ ನಡೆಸಲಾಗಿತ್ತು. ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಯುವತಿಯು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy