ಕೊರಟಗೆರೆ: ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಿ.ಜಿ.ಅರಸರಾಜು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ರೈಡ್ ಮಾಡಿರುವುದಾಗಿ ತಿಳಿದು ಬಂದಿದೆ.
ಪಟ್ಟಣದ ಬೆಸ್ಕಾಂ ಕಛೇರಿಯಲ್ಲಿ ಬುಧವಾರ ಸಂಜೆ ಸಮಯದಲ್ಲಿ ಲಂಚ ಪಡೆಯತ್ತಿರುವಾಗ ದಾಳಿ ಮಾಡಿದ್ದಾರೆ.
ಕಂಟ್ರಾಕ್ಟರ್ ಒಬ್ಬರ ಬಳಿ 50ಸಾವಿರ ರೂ. ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದ್ದು, ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸಂಜೆಯಿಂದಲೂ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ಮಾಹಿತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ.