ಕೊರಟಗೆರೆ : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಅವರ ಸಹೋದರ ಮೋಹನ್ ಲಾಲ್ ಅವರ ಅಂತಿಮ ದರ್ಶನ ಪಡೆದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೋಹನ್ ಲಾಲ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಬಿಜೆಪಿ ಮುಖಂಡ ಹಾಗೂ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮಾಜಿ ಜಿಪಂ ಸದಸ್ಯರಾದ ಶಿವರಾಮಯ್ಯ, ಪಿ.ಎನ್. ಕೃಷ್ಣಮೂರ್ತಿ ಸೇರಿದಂತೆ ಕಾಮರಾಜು, ದರ್ಶನ್ ಕೆ.ಎಲ್., ಮಂಜುನಾಥ್, ಚಿಕ್ಕರಂಗಯ್ಯ, ಪ್ರಕಾಶ್, ನಟರಾಜ್, ರಂಗಣ್ಣ, ರಮೇಶ್, ತೀರ್ಥ, ವೆಂಕಟೇಶ್, ಸಂತೋಷ್, ಲಕ್ಷ್ಮೀನಾರಾಯಣ್, ಸಾಕರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
