ಕೊರಟಗೆರೆ: ಕೃಷಿ ಇಲಾಖೆ ರೈತರಿಗೆ ಕಳಪೆ ಗುಣ ಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಸಿಗುವ ಅದೇ ಬೆಲೆಗೆ ಕೃಷಿ ಇಲಾಖೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಳಪೆ ಗುಣಮಟ್ಟದಿಂದ ಕೂಡಿದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಗೆ ರೈತರು ವಾಪಸ್ ನೀಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.
ಸರ್ಕಾರದಿಂದ ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗುಣ ಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು. ಆದರೆ ಕೊರಟಗೆರೆಯ ಕೃಷಿ ಇಲಾಖೆಯಲ್ಲಿ ಈ ರೀತಿ ಯಾಕೆ ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಬಂದಿದೆ ಎಂದು ತಿಳಿಯುತ್ತಿಲ್ಲ. ಕೂಡಲೇ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು ಕೊರಟಗೆರೆ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ತಹಶೀಲ್ದಾವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆಗೆ ತಡವಾಗಿದೆ ಅದರಲ್ಲಿಯೂ ರೈತರು ಬಿತ್ತನೆ ಮಾಡುವ ಬೀಜದಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜವನ್ನು ಕೊಟ್ಟರೆ ಹೇಗೆ? ಇದನ್ನು ಆದಷ್ಟು ಬೇಗ ಸರಿಪಡಿಸಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜವನ್ನು ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ರಂಗ ಹನುಮಯ್ಯ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲೂಕು ಕಾರ್ಯದರ್ಶಿ ಶಬೀರ್ ಪಾಷಾ, ಪದಾಧಿಕಾರಿಗಳಾದ ಮೂಡ್ಲಪ್ಪ, ಮಾರುತಿ, ಮುದ್ದಬಸಪ್ಪ, ರಾಮಕೃಷ್ಣಯ್ಯ, ಶ್ರೀನಾಥ್ ಸೇರಿದಂತೆ ಇನ್ನಿತರ ರೈತರು ಹಾಜರಿದ್ದರು.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA