ಕೊರಟಗೆರೆ: ಅತೀ ವೇಗ ಮತ್ತು ಅಜಾಗ್ರತೆಯಿಂದ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾದ ಘಟನೆ ಪಟ್ಟಣದ ವಡ್ಡಗೆರೆ ಬೈಪಾಸ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮಧುಗಿರಿ ತಾಲೂಕಿನ ದೊಡ್ಡಹೊಸಹಳ್ಳಿ ಗ್ರಾಮದ ನಿವಾಸಿ ತಿಮ್ಮಣ್ಣ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಕೊರಟಗೆರೆ ಪಟ್ಟಣದ ಸಾದರ ಸಮುದಾಯ ಭವನದ ಮುಂಭಾಗದ ರಸ್ತೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಈ ವೇಳೆ ರಸ್ತೆಬದಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೇ ಗೂಡ್ಸ್ ವಾಹನ ಉರುಳಿದ್ದು, ಅದರಡಿ ಸಿಲುಕಿದ ತಿಮ್ಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ ಐ ತೀರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


