ಕೊರಟಗೆರೆ: ಏಕಲವ್ಯ ವಸತಿಶಾಲೆಯ ಕೊಠಡಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ.ನ ಬಜ್ಜನಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್(14) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಜಿಲ್ಲಾಧಿಕಾರಿ ಶುಭಕಲ್ಯಾಣ್ ಏಕಲವ್ಯ ವಸತಿ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಾಂಶುಪಾಲ ವಿನೋದ್ ಮತ್ತು ವಾರ್ಡನ್ ಮಂಜುನಾಥ ಅಮಾನತಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ, ಪೊಲೀಸ್ ಮತ್ತು ವಿಧಿವಿಜ್ಞಾನ ತನಿಖಾತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ವಿರುದ್ಧ ಪೋಷಕರ ಆಕ್ರೋಶ:
ವಸತಿ ಶಾಲೆಯ ಕೊಠಡಿಯಲ್ಲಿ ರಕ್ತಕಾರಿಕೊಂಡು ವಿದ್ಯಾರ್ಥಿ ಸಾವನ್ನಪ್ಪಿದ್ದು, ವಿದ್ಯಾರ್ಥಿಗೆ ಸರಿಯಾದ ಸಮಯದಲ್ಲಿ ಪ್ರಥಮ ಚಿಕಿತ್ಸೆ ನೀಡಿಲ್ಲ, ಏಕಲವ್ಯ ವಸತಿಶಾಲೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲ ಮತ್ತು ವಾರ್ಡನ್ 3 ದಿನದ ರಜೆಯಲ್ಲಿರುವುದೇ ಈ ನಿರ್ಲಕ್ಷ್ಯಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಾಂಶುಪಾಲ ಮತ್ತು ವಾರ್ಡನ್ ವಿರುದ್ದ ಕೊರಟಗೆರೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q