nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    ಕೊರಟಗೆರೆ July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    By adminJuly 3, 2026No Comments2 Mins Read
    pinchani
    ಸಾಂದರ್ಭಿಕ ಚಿತ್ರ

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ 8,589 ಮಂದಿ ಫಲಾನುಭವಿಗಳಿಗೆ ಕಳೆದ ಕೆಲ ದಿನಗಳಿಂದ ಪಿಂಚಣಿ ಜಮೆಯಾಗದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಲ್ಲಿ ಆತಂಕ ಮೂಡಿಸಿದೆ.

    ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ತಹಶೀಲ್ದಾರ್ ಮಂಜುನಾಥ್, “ತಾಲೂಕಿನಲ್ಲಿ ಒಟ್ಟು 45,287 ಮಂದಿ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ 8,589 ಪ್ರಕರಣಗಳು ಮೇಲ್ನೋಟಕ್ಕೆ ಅನರ್ಹ ಅಥವಾ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿವೆ” ಎಂದು ತಿಳಿಸಿದರು.

    ಪಿಂಚಣಿ ಏಕೆ ಸ್ಥಗಿತ ?

    ಪಿಂಚಣಿ ಸ್ಥಗಿತಕ್ಕೆ ಪ್ರಮುಖ ಕಾರಣಗಳನ್ನು ವಿವರಿಸಿದ ತಹಶೀಲ್ದಾರ್, “ನಿಗದಿತ ಅರ್ಹ ವಯಸ್ಸು ಪೂರ್ಣಗೊಳ್ಳದಿರುವುದು, ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವುದು, ಆಧಾರ್–ರೇಷನ್ ಕಾರ್ಡ್‌ನಲ್ಲಿ ಹೆಸರು–ವಯಸ್ಸು ವ್ಯತ್ಯಾಸ, ಮರುಪರಿಶೀಲನೆಯಲ್ಲಿ ಅನರ್ಹತೆ ಕಂಡುಬಂದಿರುವುದು ಸೇರಿದಂತೆ ವಿವಿಧ ಆಡಳಿತಾತ್ಮಕ ಕಾರಣಗಳಿವೆ” ಎಂದರು.

    “ರೂ.4,000ಕ್ಕೂ ಹೆಚ್ಚು ಪಿಂಚಣಿ ದರದ ಮಾಹಿತಿ ಪಡೆದ ಪ್ರಕರಣಗಳನ್ನು ಈಗಾಗಲೇ ಸರಿಪಡಿಸಲಾಗಿದೆ. ಇನ್ನುಳಿದ ಪ್ರಕರಣಗಳು ತಾತ್ಕಾಲಿಕವಾಗಿ ಮಾತ್ರ ಸ್ಥಗಿತಗೊಂಡಿವೆ, ಶಾಶ್ವತವಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

    ಪರಿಹಾರ ಏನು ? ತಹಶೀಲ್ದಾರ್ ಸೂಚನೆ:

    “ಪಿಂಚಣಿ ಬಂದ್ ಆಗಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಯಸ್ಸಿನ ದಾಖಲೆ, ಬ್ಯಾಂಕ್ ಪಾಸ್‌ ಬುಕ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿ, ನಾಡ ಕಚೇರಿ ಅಥವಾ ತಾಲೂಕು ಕಚೇರಿಯ ಕಂದಾಯ ವಿಭಾಗವನ್ನು ಸಂಪರ್ಕಿಸಿ ದಾಖಲೆಗಳನ್ನು ಪರಿಶೀಲನೆಗೆ ಸಲ್ಲಿಸಬೇಕು. ದಾಖಲೆಗಳು ಸರಿಯಾಗಿದ್ದರೆ 7 ದಿನದೊಳಗೆ ಪರಿಶೀಲನೆ ಪೂರ್ಣಗೊಳಿಸಿ ಪಿಂಚಣಿಯನ್ನು ಮರು ಚಾಲನೆಗೊಳಿಸಲಾಗುವುದು,” ಎಂದು ತಹಶೀಲ್ದಾರ್ ಮಂಜುನಾಥ್ ಭರವಸೆ ನೀಡಿದರು.

    ವದಂತಿಗೆ ಕಿವಿಗೊಡಬೇಡಿ:

    “ಪಿಂಚಣಿ ಸಂಪೂರ್ಣ ಕಟ್ ಆಗಿದೆ ಎಂಬ ವದಂತಿಗಳು ಹಬ್ಬಿವೆ. ಅದು ಸುಳ್ಳು. ಇದು ಕೇವಲ ದಾಖಲೆ ಪರಿಶೀಲನೆ ಪ್ರಕ್ರಿಯೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ನೇರವಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ,” ಎಂದು ಅವರು ಮನವಿ ಮಾಡಿದರು.

    “ಇದು ಶಾಶ್ವತ ಕಟ್ ಅಲ್ಲ, ತಾತ್ಕಾಲಿಕ ಸ್ಥಗಿತ ಮಾತ್ರ. ದಾಖಲೆ ಸರಿ ಇದ್ದರೆ 7 ದಿನದಲ್ಲಿ ಪಿಂಚಣಿ ಮತ್ತೆ ಶುರುವಾಗುತ್ತೆ. ವೃದ್ಧರು ಆತಂಕ ಪಡಬೇಡಿ.”

    – ಮಂಜುನಾಥ್ ಕೆ, ತಹಶೀಲ್ದಾರ್, ಕೊರಟಗೆರೆ

    ಕೊರಟಗೆರೆ ತಾಲೂಕು ಪಿಂಚಣಿ ಚಿತ್ರಣ

    • ಒಟ್ಟು ಫಲಾನುಭವಿಗಳು: 45,287
    • ಪಿಂಚಣಿ ಸ್ಥಗಿತ: 8,589 18.9%
    • ಸರಿಪಡಿಸಿದ್ದು: ರೂ.4,000+ ದರದ ಪ್ರಕರಣಗಳು
    • ಯೋಜನೆಗಳು: ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಮಾಸಾಶನ, ಸಂಧ್ಯಾ ಸುರಕ್ಷಾ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.