ತುಮಕೂರು: ಕೊರಟಗೆರೆ ಪಿಎಸ್ ಐ ಬಿ.ನಾಗರಾಜುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಕೊರಟಗೆರೆ ಕೇಂದ್ರ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿ ಎಸ್ ಐ ಬಿ.ನಾಗರಾಜುರನ್ನು ಸಾರ್ವಜನಿಕ/ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯ ಮೇರೆಗೆ ಸ್ಥಳ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರೀಕ್ಷಕರ ಕಛೇರಿಯಿಂದ ಆದೇಶ ಹೊರಡಿಸಲಾಗಿದೆ.
ಪಿಎಸ್ ಐ ನಾಗರಾಜುಗೆ ಯಾವುದೇ ಸ್ಥಳವನ್ನು ಸೂಚಿಸಿದೇ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ಪಿಎಸ್ ಐ ಆಗಿ ಜಿ.ಚೇತನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy