ಕೊರಟಗೆರೆ: ವರಮಹಾಲಕ್ಷ್ಮಿ ಹಬ್ಬರ ಹಿನ್ನೆಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಭಕ್ತಾದಿಗಳ ಸಾಗರವೇ ಹರಿದು ಬಂದಿದೆ.
ಬೆಳಗ್ಗೆ 6:00 ಯಿಂದಲೇ ಪಂಚಾಮೃತ ಅಭಿಷೇಕ ಕುಂಕುಮ ಅಭಿಷೇಕ ಹೂವಿನ ಅಭಿಷೇಕ ಸೇರದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು, ವಿವಿಧ ವಿಶೇಷ ಹೂಗಳಿಂದ ಗೊರವನಹಳ್ಳಿ ಮಹಾಲಕ್ಷ್ಮಿ ಮಂಟಪ ಹಾಗೂ ದೇವಿಯ ಅಲಂಕಾರ ಮಾಡಲಾಗಿತ್ತು. ದರ್ಶನಕ್ಕೆ ಬಂದ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಭಕ್ತಿಯಿಂದ ಬೇಡಿಕೊಂಡು ತಾಯಿ ಅಲಂಕಾರವನ್ನ ಕಣ್ತುಂಬಿಕೊಂಡರು.
ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರ ದಂಡು ಹರಿದು ಬಂತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ, ಹೋಮ–ಹವನ, ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆಗಳು ಜರುಗಿದವು.
ಭಕ್ತರ ದರ್ಶನಕ್ಕೆ ಶ್ರೀಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು.
ರಾಜ್ಯದ ನಾನಾ ಭಾಗದಿಂದ ಆಗಮಿಸಿ ಶ್ರೀಗಳು, ಗಣ್ಯರು, ಅಧಿಕಾರಿ ವರ್ಗ ಅಮ್ಮನವರ ದರ್ಶನ ಪಡೆದರು. ಭಕ್ತರಿಗೆ ನೂತನ ದಾಸೋಹ ಭವನದಲ್ಲಿ ಚಾರಿಟಬಲ್ ಟ್ರಸ್ಟ್ ದಾಸೋಹ ವ್ಯವಸ್ಥೆ ಕಲ್ಪಿಸಿತು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC