ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ ವಿಶೇಷ ಗ್ರಾಮ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಅಪೂರ್ವ ಸಿ. ಅನಂತರಾಮು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಬಾಲಕಿಯರಿಗೆ ಉತ್ತಮ ಶಿಕ್ಷಣದೊಂದಿಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಸತಿ ನಿಲಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಸತಿ ನಿಲಯ ಆರಂಭಕ್ಕೆ ಅಗತ್ಯ ಮೂಲಸೌಕರ್ಯ, ವಿದ್ಯಾರ್ಥಿನಿಯರ ದಾಖಲಾತಿ, ಶಿಕ್ಷಣ ಸೌಲಭ್ಯಗಳು ಹಾಗೂ ಇಲಾಖಾತ್ಮಕ ಸಹಕಾರ ಕುರಿತು ಚರ್ಚೆ ನಡೆಯಿತು. ಗ್ರಾಮಸ್ಥರು ಹಾಗೂ ಪೋಷಕರು ಸಹ ಯೋಜನೆಗೆ ಸ್ವಾಗತ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಯಮುನಾ, ಸಹಾಯಕ ನಿರ್ದೇಶಕರು (ಗ್ರಾ.ಉ) ಮಧು ಸೂದನ್, ತಾ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಫೈಯರ್ ಬೇಗಮ್, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


