nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ, ಸುಳ್ಳು ದೂರು ದಾಖಲು: ವೈದ್ಯನ ವಿರುದ್ಧ ಕ್ರಮಕ್ಕೆ ಬಿಎಸ್ ಪಿ ಒತ್ತಾಯ
    ಕೊರಟಗೆರೆ October 7, 2022

    ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ, ಸುಳ್ಳು ದೂರು ದಾಖಲು: ವೈದ್ಯನ ವಿರುದ್ಧ ಕ್ರಮಕ್ಕೆ ಬಿಎಸ್ ಪಿ ಒತ್ತಾಯ

    By adminOctober 7, 2022No Comments2 Mins Read
    koratagere

    ಕೊರಟಗೆರೆ: ಕಾರ್ಯನಿರತರಾಗಿದ್ದ ಪತ್ರಕರ್ತರ ಮೇಲೆ ಹಲ್ಲೆ ಯತ್ನ ಮಾಡಿ, ಸುಳ್ಳು ಪ್ರಕರಣ ದಾಖಲಿಸಿದ ಕೊರಟಗೆರೆ ಸಾರ್ವಜನಿಕರ ಆಸ್ಪತ್ರೆಯ ಇ ಎನ್ ಟಿ ಡಾಕ್ಟರ್ ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ,ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕಚೇರಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರಿನ ಮನವಿ ಪತ್ರ ನೀಡಿ ಪ್ರತಿಭಟಿಸಿದರು.

    ರಸ್ತೆ ಅಪಘಾತ ಸಂಭವಿಸಿ ವಾಹನ ಸವಾರರು ಸಾವು ಬದುಕಿನ ನಡುವೆ ನರಳುತ್ತಿದ್ದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿರಲಿಲ್ಲ, ಆದರೂ ಸಾರ್ವಜನಿಕರ ಸಹಾಯದಿಂದ ಖಾಸಗಿ ವಾಹನದಲ್ಲಿ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳನ್ನು  ದಾಖಲಿಸಲಾಗಿತ್ತು ಆಸ್ಪತ್ರೆಯಲ್ಲೇ ಇದ್ದ ವೈದ್ಯ ನವೀನ್ ಕುಮಾರ್  ವಿಶ್ರಾಂತಿ ಕೊಠಡಿಯಿಂದ ಹೊರ ಬಾರದೇ ಅಮಾನವೀಯತೆ ಮೆರೆದಿದ್ದರು. ಈ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಗತಿ ಟಿವಿ ವರದಿಗಾರ ಹರೀಶ್ ಬಾಬು ರವರ ಮೇಲೆ ಹಲ್ಲೆ ಯತ್ನ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪತ್ರಕರ್ತರಾದ ಪುರುಷೋತ್ತಮ್, ರಂಗಧಾಮಯ್ಯ ನರಸಿಂಹಮೂರ್ತಿ ರವರಿಗೆ ಬೆದರಿಕೆ ಹಾಕಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ ಘಟನೆ ನಡೆದಿತ್ತು.


    Provided by
    Provided by

    ಈ ವಿಚಾರವಾಗಿ ಇಂದು ಬಿಎಸ್ಪಿ ಪಕ್ಷದ ಕಾರ್ಯಕರ್ತರು ಮತ್ತು ಸಾಮಾಜಿಕ ಹೋರಾಟಗಾರರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿದ ಡಾಕ್ಟರ್ ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸೋಮವಾರ ಕೊರಟಗೆರೆಯ ಕನ್ನಡಪರ, ದಲಿತಪರ, ಪ್ರಗತಿಪರ ಮತ್ತು ಪತ್ರಕರ್ತರ ಸಂಘದ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು ಅಗ್ರಹಿಸಿದರು.

    ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ನಯಾಜ್ ಅಹ್ಮದ್, ಸಮವಸ್ತ್ರ ಧರಿಸದೆ, ಶತಸ್ಕೋಪ್ ಬಳಸದೆ, ಪ್ರಥಮ ಚಿಕಿತ್ಸೆಯನ್ನೂ ನೀಡದೇ ಎರಡು  ಅಮಾಯಕ ಜೀವಗಳನ್ನು ಬಲಿ ಪಡೆದ ಡಾಕ್ಟರ್ ನವೀನ್ ರವರನ್ನು ಕೂಡಲೇ ಪೊಲೀಸ್ ಇಲಾಖೆ ಬಂಧಿಸಬೇಕು ಮತ್ತು ರಾಜ್ಯ ಸರ್ಕಾರವು ಕೂಡಲೇ ವೈದ್ಯ ನವೀನ್ ರವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಪತ್ರಕರ್ತರ ಮೇಲೆ ಹಲ್ಲೆಯತ್ನ ಮಾಡಿದ ವೈದ್ಯನನ್ನು ವೃತ್ತಿಯಿಂದ ತಕ್ಷಣವೇ ವಜಾ ಮಾಡಿ ಪತ್ರಕರ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

     ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.