nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ವಿಧಾನಸಭಾ ಕ್ಷೇತ್ರ ನಾಮಪತ್ರ ಸ್ವೀಕಾರ: ನಿಷೇಧಾಜ್ಞೆ ಜಾರಿ
    ಕೊರಟಗೆರೆ April 13, 2023

    ಕೊರಟಗೆರೆ ವಿಧಾನಸಭಾ ಕ್ಷೇತ್ರ ನಾಮಪತ್ರ ಸ್ವೀಕಾರ: ನಿಷೇಧಾಜ್ಞೆ ಜಾರಿ

    By adminApril 13, 2023No Comments2 Mins Read
    koratagere

    Provided by
    Provided by

    ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಏ.13 ರಿಂದ ಏ.20 ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಈ ಅವಧಿಯಲ್ಲಿ ಸಾರ್ವಜನಿಕ ರಜಾ ದಿನಗಳು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಯಾವಕಾಶವಿದ್ದು, ಈ ಅವಧಿಯಲ್ಲಿ ಜನಸಂದಣಿ ನಿಯಂತ್ರಿಸಲು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಛೇರಿಯ ಸುತ್ತಮುತ್ತ 100 ವೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಲಸಿದ್ದಪ್ಪ ಪೂಜೇರಿ ತಿಳಿಸಿದರು.

    ಅವರು ಕೊರಟಗೆರೆ ತಾಲೂಕು ಕಛೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ 134 ಕೊರಟಗೆರೆ (ಎಸ್.ಸಿ) ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ಏ.13 ರಿಂದ ಏ.20 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭರ್ತಿ ಮಾಡಿದ ನಾಮಪತ್ರ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ನಿಗದಿಪಡಿಸಿದ ನಮೂನೆಗಳಲ್ಲಿ ಸಲ್ಲಿಸಬಹುದಾಗಿದೆ, ಅಭ್ಯರ್ಥಿಗಳು ವೆಬ್ ಸೈಟ್  ಅಥವಾ   ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

    ನಾಮಪತ್ರ ಸಲ್ಲಿಸಲು ಏ.20 ರ ಮಧ್ಯಹ್ನ 3 ಗಂಟೆವರೆಗೆ ಅಂತಿಮ ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು ರಾಜ್ಯದ ಯಾವುದೇ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿತರಾಗಿರಬೇಕು. ಅಭ್ಯರ್ಥಿ 25 ವರ್ಷ ವಯಸ್ಸಾಗಿರಬೇಕು ಹಾಗೂ ಭಾರತೀಯ ನಾಗರೀಕನಾಗಿರ ಬೇಕು, ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಒರ್ವ ಸೂಚಕರ ಅವಕಾಶವಿರುತ್ತದೆ, ಸ್ವತಂತ್ರ ಅಭ್ಯರ್ಥಿಗೆ 10 ಮಂದಿ ಸೂಚಕರು ಕಡ್ಡಾಯವಾಗಿ ಇರತಕ್ಕದ್ದು, ಸದರಿ ಸೂಚಕರು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು, ಓರ್ವ ಅಭ್ಯರ್ಥಿಯು ಗರಿಷ್ಟ 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿಯ ಜೊತೆಗೆ 4 ಮಂದಿ ಮಾತ್ರ ಚುನಾವಣಾಧಿಕಾರಿಗಳ ಕೊಠಡಿಯ ಒಳಗೆ ಪ್ರವೇಶಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದರು.

    ಚುನಾವಣಾಧಿಕಾರಿಗಳ ಕಛೇರಿಯ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಗುರುತಿಸಿ ಸಿ.ಆರ್.ಪಿ.ಸಿ 144 ರ ಅನ್ವಯ ನಿರ್ಬಂಧಕಾಜ್ಞೆ ಹೊರಡಿಸಲಾಗಿರುತ್ತದೆ, ಸ್ವೀಕರಿಸಲಾಗಿರುವ ನಾಮಪತ್ರಗಳನ್ನು ಏ.21 ರಂದು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ಅವಧಿಯೊಳಗೆ ಅಭ್ಯರ್ಥಿಗಳ ಅಥವಾ ಸೂಚಕರ ಸಮ್ಮುಖದಲ್ಲಿ ಪರಿಶೀಲನೆ ನಡೆಸಲಾಗುವುದು, ನಾಮಪತ್ರಗಳನ್ನು ಏ.24ರ ಮಧ್ಯಾಹ್ನ 3 ಗಂಟೆಯ ಒಳಗೆ ಹಿಂಪಡೆಯಬಹುದಾಗಿರುತ್ತದೆ ಎಂದು ತಿಳಿಸಿದರು.


    Provided by
    Provided by

    ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮ್ಮೆ ಇದ್ದಲ್ಲಿ ಅದನ್ನು ಟಿ.ವಿ. ಮತ್ತು ದಿನ ಪತ್ರಿಕೆಗಳಲ್ಲಿ ಪ್ರಚಾರಪಡಿಸಬೇಕು, ಇದನ್ನು ಫಾರಂ-1 ರಲ್ಲಿ ಏ.24ರ ಮುಂಚೆ ಒಂದು ಬಾರಿ, ನಂತರದ ಏ.5 ದಿಂದ ೮ ದಿನಗಳ ಮಧ್ಯೆ ಒಂದು ಬಾರಿ, 9ನೇ ದಿನದಿಂದ ಏ.8 ರ ಮಧ್ಯೆ ಒಂದು ಬಾರಿ ಪ್ರಕಟಿಸಬೇಕು ಎಂದು ತಿಳಿಸಿದ ಅವರು, ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಬಹಿರಂಗ ಸಭೆ ಸಮಾರಂಭ ನಡೆಸಲು ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆಯಬೇಕಾಗುತ್ತದೆ.

    ಚುನಾವಣೆ ಮುಕ್ತಾಯಗೊಳ್ಳುವ 48 ಗಂಟೆ ಮುಂಚಿತವಾಗಿ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ, ರ‍್ಯಾಲಿ ನಡೆಸಲು ಅವಕಾಶವಿರುವುದಿಲ್ಲ, ಚುನಾವಣಾ ಪ್ರಚಾರದ ಅವಧಿ ಮುಗಿದ ನಂತರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರಲ್ಲದವರು ಚುನಾವಣೆ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಕ್ಷೇತ್ರವನ್ನು ತೊರೆಯತಕ್ಕದ್ದು, ದ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಳಸಲು ಅವಕಾಶವಿರುವುದಿಲ್ಲ, ಮೇ 10 ರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯುತ್ತದೆ, ಮತ  ಎಣಿಕೆಯು ಮೇ 13 ರಂದು ನಡೆಯಲಿದೆ ಎಂದು ತಿಳಿಸಿದರು.

    ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಮುನಿಶಾಮಿರೆಡ್ಡಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗಿದ್ದು,  ಅಕ್ರಮಗಳು ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಶಾಂತಿಯುತವಾಗಿ ಚುನಾವಣೆ ನಡೆಸಲು ಸಹಕರಿಸುವಂತೆ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಯ್ಯ ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.