ತುಮಕೂರು: ಆಟೋ –ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲ್ಲೂಕಿನ ವೆಂಕಟಾಪುರ ಬಳಿ ನಡೆದಿದೆ.
ಮೃತ ಯುವಕನನ್ನು ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಗೆ ಸೇರಿದ ಕಾಳೇನಹಳ್ಳಿಯ ಪವನ್ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ಕಾರ್ತಿಕ್, ಸುಜಯ್ ಅವರ ಜೊತೆ ಬಂದಿದ್ದು, ಈ ಮೂವರೂ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿಗೆ ಬಂದ ಆಟೋಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಪವನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಉಳಿದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


