nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲ್ಲೂಕಿನ ಕುಗ್ರಾಮ ಕುಮಟೇನಹಳ್ಳಿಗೆ ಹಳ್ಳವೇ ರಸ್ತೆ..!: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು
    ಕೊರಟಗೆರೆ August 30, 2022

    ಕೊರಟಗೆರೆ ತಾಲ್ಲೂಕಿನ ಕುಗ್ರಾಮ ಕುಮಟೇನಹಳ್ಳಿಗೆ ಹಳ್ಳವೇ ರಸ್ತೆ..!: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು

    By adminAugust 30, 2022No Comments2 Mins Read
    koratagere

    Provided by
    Provided by

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು 150ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ರಸ್ತೆಯೇ ಇಲ್ಲ ಈ ಗ್ರಾಮದ ಮಧ್ಯೆ ಹರಿಯುವ ಹಳ್ಳ ರಸ್ತೆಯಾಗಿ ಮಾರ್ಪಟ್ಟಿದೆ. ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಕೊರಟಗೆರೆ ಕಂದಾಯ ಗ್ರಾಮದ ಕುಮಟೇನಹಳ್ಳಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು, ಸರಿ ಸುಮಾರು 120ಕ್ಕೂ ಹೆಚ್ಚು ಮತದಾರರಿದ್ದಾರೆ. ಸದರಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದೂ ಇಲ್ಲದಂತೆ ಮಾಯವಾಗಿದೆ. ಸುಮಾರು ಏಳು ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಜೊತೆಗೆ ಮುಖ್ಯವಾಗಿ ಸಂಪರ್ಕ ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.

    ಬೆಂಡೋಣೆ ಗ್ರಾಮದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಕುಮಟೇನಹಳ್ಳಿ ಗ್ರಾಮದ ಮುಗ್ಧ ಜನರು ಹೊರ ಪ್ರಪಂಚಕ್ಕೆ ಕಾಲಿಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಕಾಶೆ ರಸ್ತೆ ತೆರವು ಮಾಡಿ ಸುಸಜ್ಜಿತವಾದ ರಸ್ತೆಯನ್ನು ನಿರ್ಮಿಸಲು ಸರಿ ಸುಮಾರು ಏಳು ವರ್ಷಗಳ ಹಿಂದಿನಿಂದಲೂ ಸತತವಾದ ಹೋರಾಟವನ್ನು ಈ ಊರಿನ ಗ್ರಾಮಸ್ಥರು ಮಾಡುತ್ತಿದ್ದಾರೆ. ಆದರೆ , ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಮಾತ್ರ ಗಾಢ ನಿದ್ರೆಗೆ ಜಾರಿದ್ದಾರೆ.

    ರಸ್ತೆ ಸಮಸ್ಯೆಯಿಂದ ಶಾಲಾ ಮಕ್ಕಳು ಶಾಲೆಗೆ ಹೋಗಲು ಆಗದೆ, ಮನೆಯಲ್ಲೇ ಉಳಿಯುತ್ತಿದ್ದಾರೆ. ವಯಸ್ಸಾದ ವೃದ್ಧರು, ಅಗವಿಕಲರು, ಪುಟ್ಟ ಮಕ್ಕಳು ತುರ್ತು ಆರೋಗ್ಯ ಸಮಸ್ಯೆ ಕಂಡು ಬಂದರೆ ಹರಿಯುವ ಹಳ್ಳದ ಮಧ್ಯೆಯೇ ಜೀವದ ಹಂಗನ್ನು ತೊರೆದು ಓಡಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.

    ಇಷ್ಟೆಲ್ಲ ಸಮಸ್ಯೆಗಳಿದ್ದರೂ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಈ ನಮ್ಮ ಗ್ರಾಮಕ್ಕೆ ಒಮ್ಮೆಯೂ ಸಹ ಭೇಟಿ ನೀಡಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ನಮ್ಮೂರಿಗೆ ಭೇಟಿ ನೀಡಿ, ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆಂದು ಆಶ್ವಾಸನೆ ಮಾತ್ರ ನೀಡಿ ಹಿಂತಿರುಗಿದ ಶಾಸಕರು ಇಲ್ಲಿಯವರೆಗೂ ಕೂಡ ನಮ್ಮ ಗ್ರಾಮಕ್ಕೆ ಬಂದಿಲ್ಲ. ನಮ್ಮ ಕಷ್ಟಗಳನ್ನು ಕೇಳಿಲ್ಲ, ಇನ್ನಾದರೂ ಶಾಸಕರು ಎಚ್ಚೆತ್ತುಕೊಂಡು ನಮ್ಮ ಗ್ರಾಮಕ್ಕೆ ಖೂದ್ದು ಭೇಟಿ ನೀಡಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದರೆ ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕಾಗಲಿ, ಯಾವುದೇ ವ್ಯಕ್ತಿಯಾಗಲಿ ಮತವನ್ನು ನೀಡದೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆಂದು ಊರಿನ ಯುವಕ ಹನುಮಂತರಾಜು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮ ಊರಿನಿಂದ ಒಂದುವರೆ ಕಿಲೋಮೀಟರ್ ದೂರವಿರುವ ಬೆಂಡೋಣೆ ಗ್ರಾಮಕ್ಕೆ ಹಳ್ಳದಲ್ಲಿಯೇ ನಡೆದುಕೊಂಡು ಸ್ನೇಹಿತರೊಂದಿಗೆ ಹೋಗುತ್ತೇವೆ. ನಮ್ಮ ಜೊತೆ ಚಿಕ್ಕ ಮಕ್ಕಳು ಶಾಲೆಗೆ ಬರುತ್ತಾರೆ. ಈ ಹಳ್ಳದಲ್ಲಿಯೇ ನಾವು ದಿನನಿತ್ಯ ಶಾಲೆಗೆ ಹೋಗುತ್ತೇವೆ. ಹೆಚ್ಚು ಮಳೆ ಬಂದರೆ ನೀರು ಜಾಸ್ತಿ ಹರಿಯುವುದರಿಂದ ನಮಗೆ ತುಂಬಾ ತೊಂದರೆ ಆಗುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಶಾಸಕರು ಮತ್ತು ಅಧಿಕಾರಿಗಳು ಬಗೆಹರಿಸಬೇಕೆಂದು ವಿದ್ಯಾರ್ಥಿನಿ ಮಾಲ ತಿಳಿಸಿದರು.

    ನಮ್ಮ ಊರಿಗೆ ಪ್ರತ್ಯೇಕವಾದ ನಕಾಶೆ ರಸ್ತೆ ಇದೆ, ಆದರೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿರುತ್ತಾರೆ. ನಾವು ಸುಮಾರು ಏಳು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದೇವೆ ಹಾಗೂ ಶಾಸಕರ ಗಮನಕ್ಕೂ ಈ ವಿಚಾರವನ್ನು ತಂದಿರುತ್ತೇವೆ ಆದರೆ ಬಲಾಡ್ಯರು ರಸ್ತೆಯನ್ನು ಹೊತ್ತುವರಿ ಮಾಡಿದ್ದು , ರಸ್ತೆಯನ್ನು ತೆರೆವು ಮಾಡಲು ಅಧಿಕಾರಿಗಳು ಮಾತ್ರ ಮುಂದೆ ಬರುತ್ತಿಲ್ಲ. ಹೀಗಾಗಿ ನಾವು ಪ್ರತಿನಿತ್ಯ ಹರಿಯುವ ಹಳ್ಳದಲ್ಲಿಯೇ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥೆ ಲಕ್ಷ್ಮಮ್ಮ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ…

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.