ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಹುದ್ದೆ ಲಭಿಸಿದ್ದು, ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ.
ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ತನ್ನನ್ನು ಸಚೇತಕರನ್ನಾಗಿ ನೇಮಕ ಮಾಡಿರೋದಕ್ಕೆ ಕೋಟಾ ಶ್ರೀನಿವಾಸ್ ಪೂಜಾರಿ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA