ತುಮಕೂರು: ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ ಕೇಸರಿ ಧ್ವಜಗಳಲ್ಲಿ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ಸಕಲ ಕೆಲಸ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದೆ.
ಗುರುವಾರ 10ನೇ ವರ್ಷದ ವೈಭವದ ಹನುಮ ಜಯಂತಿ ಹಾಗೂ ನೂತನ ರಥೋತ್ಸವ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ 11:30ಕ್ಕೆ ಕೋಟೆ ಶ್ರೀ ಆಂಜನೇಯ ಸ್ವಾಮಿಯ ವೈಭವದ ಮೆರವಣಿಗೆಯನ್ನು ತುಮಕೂರಿನ ರಾಜಬೀದಿಗಳಲ್ಲಿ ನಡೆಯಲಿದೆ.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಏನೆಂದರೆ, ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ.
ಈ ದೇವಸ್ಥಾನದ ಹೊರ ಭಾಗಗಳಲ್ಲಿ ವಿಶಾಲವಾದ ಕೋಟೆ ಇದ್ದುದರಿಂದಾಗಿ ಈ ದೇವಸ್ಥಾನಕ್ಕೆ ಕೋಟೆ ಆಂಜನೇಯ ದೇವಸ್ಥಾನ ಎಂಬ ಹೆಸರು ಬಂದಿದೆ. ಆದರೆ, ಪ್ರಸ್ತುತ ದೇವಸ್ಥಾನದ ಸುತ್ತಲಿದ್ದ ಕೋಟೆಗಳು ನಾಶವಾಗಿದ್ದು, ಕೇವಲ ದೇವಸ್ಥಾನ ಮಾತ್ರವೇ ಉಳಿದುಕೊಂಡಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700