nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    ತುಮಕೂರು July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    By Ganesh TumkuruJuly 31, 2026No Comments2 Mins Read
    kote gramadevate

    ತುಮಕೂರು: ಇಲ್ಲಿನ ಪಾಂಡುರಂಗನಗರ (ಎಮ್ಮೆಕೇರಿ) ದಲ್ಲಿರುವ ಕೋಟೆ ಶ್ರೀ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವವು ಆ.3 ರಿಂದ 6ರವರೆಗೆ ಜರುಗಲಿದೆ.

    ಆ.3 ರಂದು ಸಂಜೆ ಚಿಕ್ಕಮ್ಮ ಮತ್ತು ಆರತಿಯ ನಡೆ ಮುಡಿಯ ಮೂಲಕ ಚಿಕ್ಕಪೇಟೆ ಶ್ರೀ ಗ್ರಾಮದೇವತೆ ದೇವಸ್ಥಾನದ ಬಳಿ ಜಾತ್ರಾ ಮಂಟಪಕ್ಕೆ ಆಗಮಿಸಿ ಗದ್ದುಗೆಯಾಗುವುದು, ಆ.4 ರಂದು ಬೆಳಿಗ್ಗೆ 8.30ಕ್ಕೆ ಪಾಂಡುರಂಗನಗರದ ಎಮ್ಮೆ ಕೇರಿಯಲ್ಲಿರುವ ಮೂಲ ಶ್ರೀ ಗ್ರಾಮ ದೇವತೆ ಅಮ್ಮನವರ ದೇವಸ್ಥಾನದಲ್ಲಿ ಅಮ್ಮನವರಿಗೆ ಪುಣ್ಯಾರ್ಚನೆ ಮತ್ತು ದೃಷ್ಟಿ ಪೂಜೆ, ಮಧ್ಯಾಹ್ನ 12ಕ್ಕೆ ಅಗ್ನಿವಂಶ ಕ್ಷತ್ರಿಯರಾದ ಟಿ.ಜಿ.ಹನುಮಂತರಾಜು ಅವರ ಮನೆಯಿಂದ ಶ್ರೀ ದೊಡ್ಡಮ್ಮ –ಕಳಸವು ನಡೆ ಮುಡಿಯ ಮೂಲಕ ಪಾಂಡುರಂಗ ನಗರದ ಎಮ್ಮೆ ಕೇರಿ ಶ್ರೀ ಗ್ರಾಮ ದೇವತೆ ಅಮ್ಮನವರ ದೇವಸ್ಥಾನಕ್ಕೆ ಆಗಮಿಸುವುದು.

    ಮಧ್ಯಾಹ್ನ 1.30ಕ್ಕೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಹಿರೇಮಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಉದ್ಘಾಟನೆಯನ್ನು ಶಾಸಕ ಕೆ.ಎನ್.ರಾಜಣ್ಣ ಅವರು ನೆರವೇರಿಸುವರು.

    ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ವಿ.ಪ. ಸದಸ್ಯರಾದ ಡಾ.ಎಂ.ಆರ್. ಹುಲಿನಾಯ್ಕರ್, ಪೊಲೀಸ್ ಉಪಾಧೀಕ್ಷಕ ಚಂದ್ರಶೇಖರ್, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಪ್ರಜಾಪ್ರಗತಿ ಸಂಪಾದಕ ಡಾ. ಎಸ್.ನಾಗಣ್ಣ, ಟೂಡಾ ಮಾಜಿ ಅಧ್ಯಕ್ಷರಾದ ಬಿ.ಎಸ್.ನಾಗೇಶ್ ಅವರುಗಳು ಆಗಮಿಸುವರು.

    ಆ.5 ರಂದು ಶ್ರೀ ಗ್ರಾಮ ದೇವತೆ ಅಮ್ಮನವರಿಗೆ ಶ್ರೀ ರೇಣುಕಾಯಲ್ಲಮ್ಮನವರ ದೇವಸ್ಥಾನದಿಂದ ಟಿ.ಜಿ.ಗುಬ್ಬಣ್ಣನವರ ವಂಶಸ್ಥರಿಂದ ಕಳಸ ಆರತಿ ಮತ್ತು ಅರಸ್ ಕ್ಷತ್ರಿಯ ವಂಶಸ್ಥರಿಂದ ಆರತಿ ಮತ್ತು ಘಟ ಸೇವೆ.

    ಆ.6 ರಂದು ರಾತ್ರಿ 8ಕ್ಕೆ ಅಮ್ಮನವರಿಗೆ ಮಹಾಮಂಗಳಾರತಿ ನಂತರ ಜಾತ್ರಾ ಮಂಟಪದಿಂದ ಅಮ್ಮನವರನ್ನು ಪ್ರಮುಖ ರಾಜಬೀದಿಯಲ್ಲಿ ಮೆರವಣಿಗೆ ಮೂಲಕ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮುಖೇನ ಸಾಗಿ ಅಮಾನಿಕೆರೆಯಲ್ಲಿ ಸಾಗುವುದು. ಮುಕ್ತಾಯ ಸಮಾರಂಭದ ಉದ್ಘಾಟನೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿ.ಸುರೇಶ್ ಗೌಡ, ಎಸ್.ಶಿವಣ್ಣ, ಆರ್.ರಾಜೇಂದ್ರ, ಅವಿನಾಶ್, ಬಿ.ಎಸ್.ಮಂಜುನಾಥ್, ನಟರಾಜಶೆಟ್ಟರು, ಮಹೇಶ್ ಬಾಬು ಅವರುಗಳು ಆಗಮಿಸುವರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.