ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 29 ಮತ್ತು 30ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿ ಧೂಳೆಬ್ಬಿಸಿ ಹೋಗಿದ್ದರು. ಇಂದು ಪುನಹ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇಂದು, ನಾಳೆ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10.25ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು ಬೆಳಗ್ಗೆ 11 ಗಂಟೆಗೆ ಚಳ್ಳಕೆರೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಮಧ್ಯಾಹ್ನ 1 ಗಂಟೆಗೆ ಹೊಸಪೇಟೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 2.45ಕ್ಕೆ ಸಿಂಧನೂರು ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಸುಮಾರು 45 ನಿಮಿಷ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಇಂದು ರಾತ್ರಿ ಕಲಬುರಗಿಯಲ್ಲೇ ತಂಗಲಿದ್ದಾರೆ.
ಇನ್ನು ಕಲಬುರಗಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ಕಲಬುರಗಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಡಿಸಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ. ನಾಳೆ ಮಧ್ಯಾಹ್ನ 12ರವರೆಗೆ ಡ್ರೋನ್ ಕ್ಯಾಮರಾ ಹಾರಾಟ ನಿಷೇಧ ಹೇರಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


