ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಗೋಕಾಕ್ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ.
ಉದ್ಯಮಿ ಫೆ.10ರಂದು ಗೋಕಾಕ್ ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಉದ್ಯಮಿ ರಾಜು ಝಂವರ್‌ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ರಾಜು ಝಂವರ್ ನಾಪತ್ತೆ ಬಳಿಕ ವೈದ್ಯ ಡಾ.ಸಚಿನ್ ಶಿರಗಾವಿ ಕೂಡ ರಾಜುಗೆ ದೂರವಾಣಿ ಕರೆ ಮಾಡಿದ್ದನು. ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ.
ತಾನು (ಡಾ.ಸಚಿನ್ ಶಿರಗಾವಿ) ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ. ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


