ಹುಣಸೂರು: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಮೂರು ಹಸುಗಳು ಸಜೀವ ದಹನವಾದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಮುಳ್ಳೂರು ಗ್ರಾಮದ ಜಯಮ್ಮ ಎಂಬುವವರಿಗೆ ಸೇರಿದ ಮೂರು ಹಸುಗಳು ಘಟನೆಯಲ್ಲಿ ಸಾವನ್ನಪ್ಪಿದ್ದು, ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಮಲಗಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದು ಮೂರು ಹಸುಗಳು ಸಜೀವ ದಹನವಾಗಿದೆ.
ಇನ್ನೂ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಹಸುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz