ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ 3ನೇ ಡೋಸ್ ಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಿನ್ನೆ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದೇನೆ. ಮುಂದಿನ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದರು.
ಜಿನೋಮಿಕ್ ಟೆಸ್ಟ್ ಗೆ ಸೂಚಿಸಿದ್ದೇನೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ 3ನೇ ಡೋಸ್ ಲಸಿಕೆ ಪಡೆಯದವರ ಬಗ್ಗೆಯೂ ನಿಗಾ ವಹಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy