ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು.
ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.
ದ.ಕ.ಸಂಪಾಜೆಗೆ ಭೇಟಿ:
ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ಕಂದಾಯ ಸಚಿವ ಆರ್. ಆಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ ಸಚಿವ ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ , ಮಾಜಿ ಶಾಸಕ ಪ್ರಮೋದ್ ಮಧ್ವರಾಜ್,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಸದಸ್ಯರಾದ ಅಬೂಸಾಲಿ ಪಿ. ಕೆ, ಎಸ್. ಕೆ ಹನೀಫ್, ರಜನಿ ಶರತ್, ವಿಜಯ ಅಲಡ್ಕ, ಕೇಶವ ಬಂಗ್ಲೆ ಗುಡ್ಡೆ, ಇ.ವಿ. ಪ್ರಶಾಂತ್, ರಹೀಮ್ ಬೀಜದಕಟ್ಟೆ, ರಾಮಚಂದ್ರ, ಗಣಪತಿಭಟ್ ಕುಂಞಿಕಣ್ಣ ಕೈಪಡ್ಕ ವರದಾರಜ್, ತೇಜ ಬಾಚಿಗದ್ದೆ ಮತ್ತಿತರರು ಉಪಸ್ಥಿತರಿದ್ದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy