ಬೆಂಗಳೂರು: ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ನಗರದ ಅಂಬೇಡ್ಕರ್ ಭವನದಲ್ಲಿ ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಆಂತರಿಕ ಚುನಾವಣೆ ನಡೆಯಲಿದೆ.
ಡಿ.ಕೆ.ಶಿವಕುಮಾರ್ ಎದುರು ಯಾರಾದರೂ ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ.
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೈಲಾ ಪ್ರಕಾರ ಮೂರು ವರ್ಷಕ್ಕೊಮ್ಮೆ ಚುನಾವಣೆ ನಡೆಸಬೇಕಿದೆ.
ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಮೂಲೆ ಗುಂಪಾಗಿತ್ತು. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೋಂದಣಿಗೆ ಚಾಲನೆ ಸಿಕ್ಕಿದೆ.
ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆಯಲಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿರುವ ಕಾರಣ ಎಲ್ಲಾ ರಾಜ್ಯಗಳ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಅಧಿಕಾರದಲ್ಲಿ ಮುಂದುವರಿಸುವ ಚಿಂತನೆ ವರಿಷ್ಠರ ಮಟ್ಟದಲ್ಲಿ ನಡೆದಿದೆ.
ವರಿಷ್ಠರ ತೀರ್ಮಾನದ ಪ್ರಕಾರ ಡಿ. ಕೆ. ಶಿವಕುಮಾರ್ ಇನ್ನೊಂದು ವರ್ಷ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ. ಕಾಂಗ್ರೆಸ್ ಶಾಸಕರು, ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


