nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ: ಸಿ.ಟಿ.ರವಿ
    ರಾಜ್ಯ ಸುದ್ದಿ October 15, 2023

    ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ: ಸಿ.ಟಿ.ರವಿ

    By adminOctober 15, 2023No Comments2 Mins Read
    ct ravi

    ಬೆಂಗಳೂರು: ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ 60 ಲಂಚ ಕೇಳಿದಂತಾಗಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯ ಸಂಸ್ಕತಿ ಪುತ್ರನ ಬಳಿ ಶೇ 60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರದಡಿ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.


    Provided by
    Provided by

    ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ ಕೇವಲ ಗುತ್ತಿಗೆದಾರರಿಗೆ, ಸರಕಾರಿ ಯೋಜನೆಗಳಿಗೆ ಸೀಮಿತವಾಗಿಲ್ಲ. ಅದು ಕಲಾವಿದರ ಗೌರವಧನದ ವರೆಗೂ ಕೈಚಾಚಿಬಿಟ್ಟಿದೆ. ಇದು ದುರಂತದ ಸಂಗತಿ ಮಾತ್ರವಲ್ಲ; ಸಾಂಸ್ಕøತಿಕ ಅಧಃಪತನದತ್ತ ಇವರು ರಾಜ್ಯವನ್ನು ಒಯ್ಯುತ್ತಿದ್ದಾರೆ ಎಂದು ಆಕ್ಷೇಪಿಸಿದರು.

    ಮಾನ್ಯ ಮುಖ್ಯಮಂತ್ರಿಗಳು ನಮ್ಮದು ಭ್ರಷ್ಟಾಚಾರರಹಿತ ಆಡಳಿತ ಎನ್ನುತ್ತಾರೆ. ಅಬ್ಬರಿಸಿ ಬೊಬ್ಬಿರಿವ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅವರ ಮೂಗಿನ ಕೆಳಗೇ ಇದು ನಡೆದಿದೆ. ಬೇರೆ ಜಿಲ್ಲೆಗಳಲ್ಲಿ ಇನ್ನು ಪರಿಸ್ಥಿತಿ ಹೇಗಿರಬಹುದು ಎಂದು ಪ್ರಶ್ನೆಯನ್ನು ಮುಂದಿಟ್ಟರು. ಒತ್ತಡದ ಮೂಲಕ ಪ್ರಕರಣ ಮುಚ್ಚಿಹಾಕಲು ಮುಂದಾದುದು ಇನ್ನಷ್ಟು ನಾಚಿಕೆಗೇಡಿನ ಸಂಗತಿ ಎಂದರು.

    ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಹಿಂದೆ ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿದ್ದರು. ಈಗ ಗುತ್ತಿಗೆದಾರ ಅಂಬಿಕಾಪತಿ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ- ಹೀಗೆ ಕೋಟಿ ಕೋಟಿ ಹೊರಕ್ಕೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂಬರ್ 1, ನಂಬರ್ 2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ ಎಂದು ವಿವರ ನೀಡಿದರು. ಇದರ ಸಿಬಿಐ ತನಿಖೆ ಮಾಡಿ ಎಂದು ಆಗ್ರಹಿಸಿದರು.

    ನಂಬರ್ 1, ನಂಬರ್ 2 ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ನೂರಾರು ಬೇನಾಮಿಗಳನ್ನು ನೇಮಿಸಿದ್ದಾರೆ. ಇಬ್ಬರು ಬೇನಾಮಿಗಳು ಮಾತ್ರ ಸಿಕ್ಕಿದ್ದಾರೆ. ಈ ಹಣವೇ ಬೇನಾಮಿಗಳ ನೇಮಕಕ್ಕೆ ಸಾಕ್ಷಿ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ಗೋವಿಂದರಾಜು ಅವರ ಡೈರಿ ಇದಕ್ಕೆ ಸಾಕ್ಷಿ ಆಗಿತ್ತು. ಆರ್‍ಜಿ ಯಾರು, ಎಸ್‍ಜಿ ಯಾರು, ಎಷ್ಟೆಷ್ಟು ಕೊಟ್ಟಿದ್ದಾಗಿ ಡೈರಿ ಸಾಕ್ಷಿ ಕೊಟ್ಟಿತ್ತು ಎಂದು ಅವರು ತಿಳಿಸಿದರು.

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.