ತುಮಕೂರು: ಲಂಚದ ಹಣ ಸ್ವೀಕರಿಸುವಾಗಲೇ ಕೆಪಿಟಿಸಿಎಲ್ ಚೀಫ್ ಎಂಜಿನಿಯರ್ ನಾಗರಾಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಿ.ಎಚ್ ರಸ್ತೆ ಸಮೀಪದ ಕೆಪಿಟಿಸಿಎಲ್ ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ನಾಗರಾಜನ್’ರನ್ನು ವಶಕ್ಕೆ ಪಡೆಯಲಾಗಿದೆ.
ಪವರ್ ಲೈನ್ ಎಳೆಯಲು ಅನುಮತಿ ನೀಡಲು ಗುತ್ತಿಗೆದಾರರೊಬ್ಬರಿಂದ ನಾಗರಾಜನ್ 1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆಗಸ್ಟ್ 4ರಂದು 50 ಸಾವಿರ ಮುಂಗಡ ನೀಡಿದ್ದ ಗುತ್ತಿಗೆದಾರ ಉಳಿದ 50 ಸಾವಿರ ರೂ.ಗಳನ್ನು ನೀಡುವಾಗ ಲೋಕಾಯುಕ್ತ ದಾಳಿ ನಡೆದಿದೆ.
ತುಮಕೂರು ಲೋಕಾಯುಕ್ತ ಎಸ್.ಪಿ.ಬಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಚೀಫ್ ಎಂಜಿನಿಯರ್ ನಾಗರಾಜನ್ ರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA