ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದರು.
ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು.
ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ:
ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುವ. ಸಾಧ್ಯತೆಯಿರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


