ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ.
ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದೆ.
ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಸೈಬರ್ ಪೊಲೀಸರು, ಕಾಲೇಜ್ ಪ್ರಾಚಾರ್ಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ಪ್ರಾಚಾರ್ಯರ ಕಣ್ಣೀರಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಲಿಂಕ್ ಆಗಿರುವ ಜಾಡು ಹಿಡಿದುಕೊಂಡು ಬಂದ ಬೆಳಗಾವಿ ಪೊಲೀಸರು ಭಾರಿ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz