ಬೆಳಗಾವಿ: ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ
ಮೂರ್ತಿಯ ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ನಿಂದ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ. ಬೆಳಗ್ಗಿನ ಜಾವ 3ರ ಸುಮಾರಿಗೆ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ತಿಲಕವಾಡಿ ಠಾಣೆ ಪೊಲೀಸರು, ಪ್ರತಿಮೆಯನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ರಾಯಣ್ಣ ಅಭಿಮಾನಿ ಸಂಘಟನೆಗಳು ತಿಲಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700