ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ (ಕೆಆರ್‌ಇಡಿಎಲ್) ಯೋಜನಾ ನಿರ್ದೇಶಕರಾಗಿದ್ದ ಡಿ.ಕೆ. ದಿನೇಶ್ ಕುಮಾರ್ (50) ಮೈಸೂರಿನ ಬೋಗಾದಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.
ಅವರು ಪತ್ನಿ, ಕಿರಿಯ ಪುತ್ರನೊಂದಿಗೆ ವಾಸವಿದ್ದರು. ಹಿರಿಯ ಪುತ್ರ ಮಂಗಳೂರಿನಲ್ಲಿ ಓದುತ್ತಿದ್ದಾರೆ. ದಿನೇಶ್ ಕುಮಾರ್ ಮೃತಪಟ್ಟು 40 ಗಂಟೆಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ನ. 27 ರಂದು ರಾತ್ರಿ ಜೊತೆಯಲ್ಲೇ ಊಟ ಮಾಡಿ ಮಲಗಿದ್ದೆವು.ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ದಿನೇಶ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅದನ್ನು ನೋಡಿ ನಾವೂ ಮೂರ್ಛೆ ಹೋದೆವು ಎಂದು ಪತ್ನಿ ಮತ್ತು ಪುತ್ರ ಹೇಳಿಕೆ ನೀಡಿದ್ದಾರೆ.
ಮೃತದೇಹ ಊದಿಕೊಂಡಿದ್ದು ಬಾಯಲ್ಲಿ ರಕ್ತಸ್ರಾವವಾಗಿದೆ. ದೇಹದ ಕೆಲಭಾಗ ಗಾಯವಾಗಿದೆ. ಈ ಸಾವಿನಲ್ಲಿ ಅನುಮಾನವಿದ್ದು, ಜೊತೆಯಲ್ಲಿಯೇ ಇದ್ದ ಪತ್ನಿ, ಪುತ್ರ, ಕೆಲಸಗಾರರನ್ನು ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಮೃತ ವ್ಯಕ್ತಿಯ ಸೋದರ ಮಾವ ಮಂಡ್ಯದ ವಕೀಲ ಎಚ್.ಎಂ. ನಾರಾಯಣ ಸರಸ್ವತಿಪುರಂ ಠಾಣೆಗೆ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


