ಉಡುಪಿ: ಉಡುಪಿಯ ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು ಎಂದು ಕಾಂಗ್ರೆಸ್ ನ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಕಾರ್ಯಕ್ರಮ ‘ವಿಶ್ವಾರ್ಪಣಂ’ನಲ್ಲಿ ಮಾತನಾಡಿದ ಅವರು, ಉಡುಪಿಯ ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳುವ ನಿರ್ಧಾರದ ವಿರುದ್ಧ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy