ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ’(ಕೆಆರ್ ಪಿ) ಇತ್ತೀಚೆಗೆ ಘೋಷಣೆಯಾಗಿತ್ತು. ಇದೀಗ ಪಕ್ಷದ ಬಾವುಟವನ್ನು ಅಧಿಕೃತವಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಿಡುಗಡೆಗೊಳಿಸಿದ್ದಾರೆ.
ಬೆಣಕಲ್ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅರುಣಾ ಲಕ್ಷ್ಮೀ ಪಕ್ಷದ ಬಾವುಟವನ್ನು ಬಿಡುಗಡೆ ಮಾಡಿದರು. ಹಸ್ತಲಾಘವ ಹೊಂದಿರುವ ಸಹಕಾರ ಮಾದರಿಯ ಚಿಹ್ನೆಯನ್ನು ಬಾವುಟದಲ್ಲಿ ಬಳಕೆ ಮಾಡಲಾಗಿದೆ.
ಬಾವುಟ ಬಿಡುಗಡೆಯ ಬಳಿಕ ಮಾತನಾಡಿದ ಅರುಣಾ ಲಕ್ಷ್ಮೀ, ಇಡೀ ರಾಜ್ಯ ಕಲ್ಯಾಣ ಕರ್ನಾಟಕ ಆಗಬೇಕೆಂಬುದು ಜನಾರ್ದನ್ ರೆಡ್ಡಿಯವರ ಬಯಕೆಯಾಗಿದೆ. ತಾವು ಹುಟ್ಟಿ ಬೆಳೆದ ಬಳ್ಳಾರಿ ಪ್ರಚಂಚದ ಭೂಪಟದಲ್ಲಿ ಕಾಣಬೇಕು. ಅವರ ಆಶಯದಂತೆ ಕೆಲಸ ಮಾಡುವುದು ನನ್ನ ಜವಾಬ್ದಾರಿ ಆಗಿದೆ ಎಂದರು.
ಜನಾರ್ದನ್ ರೆಡ್ಡಿ ಅವರಿಗೆ ಕೋರ್ಟ್ ನಿರ್ಬಂಧ ಇರುವುದರಿಂದ ನಾನು ಬೆಣಕಲ್ ಗ್ರಾಮಕ್ಕೆ ಬಂದಿದ್ದೇನೆ. ಕುರುಬ ಸಮಾಜದ ಜನರ ಆಶೀರ್ವಾದ ನಮ್ಮ ಮೇಲಿದ್ದರೆ ಚುನಾವಣೆ ಗೆದ್ದೇ ಗೆಲ್ಲುತ್ತೇವೆ ಎಂಬುದು ನನ್ನ ಪತಿಯ ನಂಬಿಕೆ ಆಗಿದೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


