ಬೀದರ್: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ಕಾರ್ಯವೈಖರಿ ಬಗ್ಗೆ ಕೆಲ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಕೆಆರ್ ಎಸ್ ಪಕ್ಷವು ಲಂಚಮುಕ್ತ ಅಭಿಯಾನಕ್ಕೆ ಚಾಲನೆ ನೀಡಿತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಗೌರೆ, ಕೆಆರ್’ಎಸ್ ಪಕ್ಷವು ಸ್ವಚ್ಛ ಪ್ರಾಮಾಣಿಕ ಮತ್ತು ಜನಪರ ರಾಜಕಾರಣಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಈ ಮೂಲಕ ಜನರ ಏಳಿಗೆಗೆ ಮತ್ತು ಸಂಕಷ್ಟಕ್ಕೆ ನೆರವಾಗಲು ಬಯಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ತಾಲೂಕಿನ ಸರ್ಕಾರಿ ಕಚೇರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಯನ್ನು ಕಂಡು ಪರಿಶೀಲಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲು ತಮಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ KRS ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿಯಾದ ತುಕಾರಾಮ ಗೌರೇ, ಜಿಲ್ಲಾ ಅಧ್ಯಕ್ಷರಾದ ಹನುಮಂತ ಮಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಜರಂಗ್ ಪವಾರ್, ಶಿವರಾಜ್ ಶ್ರೀಮಂಗಲೇ, ವಿಠಲ್ ರಾವ್ ಬಿ.ಚಟ್ನಳ್ಳಿಕರ್, ಸಂಗಪ್ಪ ಬಂಡೆ, ದಯಾನಂದ ಸ್ವಾಮಿ, ಸೋಮ್ ನಾಥ್ ಶಾಸ್ತ್ರಿ, ಪ್ರಭು ಬಾಮಂದಿ, ಕೆಆರ್ ಎಸ್ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296