ಮೈಸೂರು: ಮೈಸೂರಿನ ಕೆ.ಆರ್.ಎಸ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಕೂಡ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಕೆಆರ್ಸ್ ಗೆ ತೆರಳುವ ಮಾರ್ಗದ ಪ್ರಿನ್ಸೆಸ್ ರಸ್ತೆಯನ್ನು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಮರುನಾಮಕರಣ ಮಾಡದೇ ಪರಂಪರೆಯನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ.
ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಸಹ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx