ತಿಪಟೂರು: ಕೇಂದ್ರ ಸರ್ಕಾರವು ಹೊಸ 3 ಕೃಷಿ ಕಾಯ್ದೆಗಳನ್ನುವಾಪಸ್ ಪಡೆದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ನಗರದ ನಗರಸಭೆ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.
3 ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಕಾಂಗ್ರೆಸ್ ಮುಖಂಡ ಟೂಟ ಶಶಿಧರ್ ಹೇಳಿದರು.
ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯಬೇಕು ಮತ್ತು ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ರೈತ ಮುಖಂಡರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಡಿಎಸ್ ಎಸ್ ಉಪಾಧ್ಯಕ್ಷ ಶಿವಕುಮಾರ್ ಮತಿಘಟ್ಟ. ರೈತ ಮುಖಂಡರು ಮತ್ತು ಇನ್ನು ಮುಂತಾದ ಮುಖಂಡರುಗಳು ಹಾಜರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700