nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ ಕೆಲಸಗಳಿಗಾಗಿ ಡ್ರೋನ್ ಖರೀದಿಸುವವರಿಗೆ ಇಲ್ಲಿದೆ ಬಂಪರ್ ಸುದ್ದಿ..!
    ರಾಷ್ಟ್ರೀಯ ಸುದ್ದಿ January 24, 2022

    ಕೃಷಿ ಕೆಲಸಗಳಿಗಾಗಿ ಡ್ರೋನ್ ಖರೀದಿಸುವವರಿಗೆ ಇಲ್ಲಿದೆ ಬಂಪರ್ ಸುದ್ದಿ..!

    By adminJanuary 24, 2022No Comments2 Mins Read

    ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಔಷಧಿ ಸಿಂಪಡಣೆ, ಸರಕು ಸಾಗಾಣಿಕೆ ಸೇರಿದಂತೆ ಹಲವು ಕೃಷಿ ಕೆಲಸಗಳಿಗೆ ಬಳಕೆಯಾಗುವ ಡ್ರೋನ್ಗಳ ಖರೀದಿಗೆ ಆರ್ಥಿಕ ನೆರವು ಘೋಷಣೆ ಮಾಡಿದೆ.

    ಭಾರತದಲ್ಲಿ ಕರಾರುವಾಕ್ಕಾದ ಆಧುನಿಕ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಲ ನೀಡುವ ಭಾಗವಾಗಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕೃಷಿ ವಲಯದ ಪಾಲುದಾರರಿಗೆ ಡ್ರೋನ್ ತಂತ್ರಜ್ಞಾನವನ್ನು ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡಲು ಪ್ರಮುಖ ಮಾರ್ಗ ಸೂಚಿಗಳನ್ನು ಪ್ರಕಟಿಸಿದೆ.ಕೃಷಿ ಯಾಂತ್ರೀಕರಣ ಉಪಮಿಷನ್ (ಎಸ್‍ಎಂಎಎಂ)ನ ಮಾರ್ಗಸೂಚಿಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಕೃಷಿ ಡ್ರೋನ್ ವೆಚ್ಚದ ಶೇ.100ವರೆಗೆ ಅಥವಾ 10 ಲಕ್ಷ ರೂ. ಇವೆರಡರಲ್ಲಿ ಯಾವುದು ಕಡಿಮೆಯೋ ಅದನ್ನು ಅನುದಾನವಾಗಿ ನೀಡಲು ನಿರ್ಧರಿಸಿದೆ.ಕೃಷಿ ಯಂತ್ರೋಪಕರಣಗಳ ತರಬೇತಿ ಮತ್ತು ಪರೀಕ್ಷಾ ಸಂಸ್ಥೆಗಳು, ಐಸಿಎಆರ್ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾನಿಲಯಗಳಿಗೆ ನೀಡಲಾಗುತ್ತದೆ.


    Provided by
    Provided by

    ಈ ಸಂಸ್ಥೆಗಳು ರೈತರ ಹೊಲಗಳಲ್ಲಿ ಡ್ರೋನ್ ತಂತ್ರಜ್ಞಾನದ ದೊಡ್ಡ ಪ್ರಮಾಣದ ಪ್ರಾತ್ಯಕ್ಷಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.ರೈತ ಉತ್ಪಾದಕ ಸಂಸ್ಥೆಗಳು ಡ್ರೋನ್ ಖರೀದಿಗೆ ಶೇ.75 ವರೆಗೆ ಅನುದಾನ ಪಡೆಯಲು ಅರ್ಹವಾಗಿವೆ. ಡ್ರೋನ್‍ಗಳನ್ನು ಖರೀದಿಸಲು ಬಯಸದ ಕಸ್ಟಮ್ ಹೈರಿಂಗ್ ಕೇಂದ್ರಗಳು, ಹೈಟೆಕ್ ಹಬ್‍ಗಳು ಬಾಡಿಗೆಗೆ ಪಡೆಯಲು ಅವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್‍ಗೆ ಆರು ಸಾವಿರ ರೂ. ವೆಚ್ಚವನ್ನು ಒದಗಿಸಲಾಗುತ್ತದೆ. ಡ್ರೋನ್ ಹಣಕಾಸಿನ ನೆರವು ಮತ್ತು ಅನುದಾನ ಮುಂದಿನ ವರ್ಷದ ಮಾರ್ಚ್ 31ರವರೆಗೆ ಲಭ್ಯವಿರುತ್ತದೆ.

    ಡ್ರೋನ್ ಅಪ್ಲಿಕೇಶನ್ ಮೂಲಕ ಎಲ್ಲ ರೀತಿಯ ಕೃಷಿ ಸೇವೆಗಳನ್ನು ಒದಗಿಸುವ ಸಲುವಾಗಿ ರೈತರ ಸಹಕಾರಿ ಸೊಸೈಟಿಗಳು, ಎಫ್ ಪಿಒಗಳು ಮತ್ತು ಗ್ರಾಮೀಣ ಉದ್ಯಮಿಗಳು ಈಗಾಗಲೇ ಸ್ಥಾಪಿಸಿರುವ ಗ್ರಾಹಕ ಬಾಡಿಗೆ ಕೇಂದ್ರಗಳು ಡ್ರೋನ್ ಖರೀದಿಸಲು ಮೂಲ ವೆಚ್ಚದ ಶೇ.40ರಷ್ಟು ಅಥವಾ 4 ಲಕ್ಷ ರೂ.ಗಳು ಇದರಲ್ಲಿ ಯಾವುದು ಕಡಿಮೆಯೋ ಅಷ್ಟು ಹಣಕಾಸಿನ ನೆರವು ಲಭ್ಯವಾಗುತ್ತದೆ.ಗ್ರಾಹಕರ ಬಾಡಿಗೆ ಕೇಂದ್ರಗಳನ್ನು ಸ್ಥಾಪಿಸುವ ಕೃಷಿ ಪದವೀಧರರು ಮೂಲ ವೆಚ್ಚದ ಶೇ.50 ಅಥವಾ ಡ್ರೋನ್ ಖರೀದಿಗೆ 5 ಲಕ್ಷ ರೂ. ವರೆಗೆ ಅನುದಾನ ಪಡೆಯಲು ಅರ್ಹರಾಗಿರುತ್ತಾರೆ. ಗ್ರಾಮೀಣ ಉದ್ಯಮಶೀಲರು ಮಾನ್ಯತೆ ಪಡೆದ ಪ್ರೌಢಶಿಕ್ಷಣ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಅಥವಾ ಯಾವುದೇ ಅಕೃತ ರಿಮೋಟ್ ಪೈಲಟ್ ತರಬೇತಿ ಸಂಸ್ಥೆ ನಿರ್ದಿಷ್ಟಪಡಿಸಿದ ಸಂಸ್ಥೆಯಿಂದ ರಿಮೋಟ್ ಪೈಲಟ್ ಪರವಾನಗಿ ಹೊಂದಿರಬೇಕು ಎಂದು ಸೂಚಿಸಲಾಗಿದೆ.

    ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಷರತ್ತು ಬದ್ಧ ವಿನಾಯಿತಿ ಮಾರ್ಗಗಳಲ್ಲಿ ಡ್ರೋನ್ ಕಾರ್ಯಾಚರಣೆಗೆ ಅನುಮತಿ ನೀಡಿವೆ. ಭಾರತದಲ್ಲಿ ಡ್ರೋನ್ಗಳ ಬಳಕೆ ಮತ್ತು ಕಾರ್ಯಾಚರಣೆಯನ್ನು ನಿಯಂತ್ರಿಸಲು ನಾಗರಿಕ ವಿಮಾನಯಾನ ಸಚಿವಾಲಯ, 2021 ಆಗಸ್ಟ್ 25ರಂದು ಜಿಎಸ್‍ಆರ್ ಸಂಖ್ಯೆ 589(ಇ) ಮೂಲಕ ಡ್ರೋನ್ ನಿಯಮಾವಳಿ-2021 ಪ್ರಕಟಿಸಿದೆ.

    ಕೃಷಿ, ಅರಣ್ಯ ಮತ್ತಿತರ ಪ್ರದೇಶಗಳಲ್ಲಿ ಬೆಳೆ ರಕ್ಷಣೆ, ಕೀಟನಾಶಕ ಸಿಂಪಡಣೆ, ಮಣ್ಣು ಮತ್ತು ಬೆಳೆ ಪೋಷಕಾಂಶಗಳ ಸಿಂಪಡಣೆಗಾಗಿ ಡ್ರೋನ್ ಬಳಕೆ ಮಾಡಬಹುದಾಗಿದೆ. ಡ್ರೋನ್ ಬಳಕೆ ಎಲ್ಲರಿಗೂ ಲಭ್ಯವಾಗುವಂತೆ ಮಾಡಿದರೆ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತವೆ, ದೇಶಿಯ ಡ್ರೋನ್ ಉತ್ಪಾದನೆಯೂ ಹೆಚ್ಚಾಗಲಿದೆ ಎಂದು ಕೃಷಿ ಮಂತ್ರಾಲಯ ತಿಳಿಸಿದೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.