ಬೆಂಗಳೂರು: ವಿದ್ವಾಂಸ, ಪ್ರವಚನಕಾರ ಕೆ.ಎಸ್.ನಾರಾಯಣಾಚಾರ್ಯ (88) ಅವರು ಶುಕ್ರವಾರ ಮುಂಜಾನೆ 2 ಗಂಟೆಗೆ ನಿಧನರಾಗಿದ್ದಾರೆ.
ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ನ್ಯೂ ಬಿಇಎಲ್ ರಸ್ತೆಯ ಜಲದರ್ಶಿನಿ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿದ್ವಾಂಸರೂ, ಭಾರತೀಯ ಸಂಸ್ಕೃತಿಯ ಪ್ರವಚನದ ಹರಿಕಾರರೂ ಆಗಿದ್ದ ಕೆ.ಎಸ್.ನಾರಾಯಣಾಚಾರ್ಯ ಅವರು, ರಾಮಾಯಣಸಹಶ್ರೀ, ಗೀತಾರತ್ನನಿಧಿ, ರಾಮಾಯಣ ಪಾತ್ರ ಪ್ರಪಂಚ, ಅಗಸ್ತ್ಯ, ಶ್ರೀಮಾತೇ ಕುಂತಿ ಕರೆದಾಗ, ಚಾಣಕ್ಯ ನೀತಿ ಸೂತ್ರಗಳು, ಶ್ರೀರಾಮಾವತಾರ ಸಂಪೂರ್ಣವಾದಾಗ, ವನದಲ್ಲಿ ಪಾಂಡವರು, ದಶಾವತಾರ ಸೇರಿದಂತೆ 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದರು. ಕನ್ನಡದ ವಿವಿಧ ಪತ್ರಿಕೆ ಮತ್ತು ವಾರಪತ್ರಿಕೆಗಳಿಗೆ ಅಂಕಣಕಾರರಾಗಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700