ಮಾಯಸಂದ್ರ: ಕಳೆದ 4 ತಿಂಗಳಿನಿಂದ ಖಾಲಿ ಇದ್ದ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಮಾಯಸಂದ್ರದ ಅಧ್ಯಕ್ಷ ಸ್ಥಾನಕ್ಕೆ ಪಿ.ಎನ್.ಜವರೇಗೌಡರವರಿಗೆ ಸಂಸ್ಥಾಪಕ ಅಧ್ಯಕ್ಷರಾದ ಎನ್.ಆರ್.ಜಯರಾಮ್’ರವರು ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ಅಧ್ಯಕ್ಷರನ್ನು ನೇಮಕ ಮಾಡಲಾಯಿತು.
ಇದೇ ಸಂದರ್ಭದಲ್ಲಿ 2021-2022ರ ಸಾಲಿನ SSLC ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ಮಾಯಸಂದ್ರ ಹೋಬಳಿಯ ಬಿಂದು,ಮಹಾಲಕ್ಷ್ಮಿ ಮತ್ತು ತೇಜಸ್ವಿನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದ ನಂತರ ಸರ್ವರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB