ತುಮಕೂರು:ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, 9 ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ. ಮೃತರನ್ನು ತಾಲ್ಲೂಕಿನ ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ ಇನ್ನುಳಿದಂತೆ ಆಟೋದಲ್ಲಿದ್ದ 9 ಮಂದಿ ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ.
ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ಘಟನೆ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿ ಗೆ ತೆರಳುತ್ತಿದ್ದ ಮಹಿಳೆಯರಾಗಿದ್ದಾರೆ. ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


