ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ
ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಘಟನೆ ಸಂಭವಿಸಿದೆ. ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಕಾರಿನಲ್ಲಿದ್ದ
ಗಿರೀಶ್ (37), ಮಾನ್ಯ (17), ಮೃತ ದುರ್ದೈವಿಗಳು. ಬಸ್ಸಿನಲ್ಲಿದ್ದ ಗಾಯಾಳುಗಳನ್ನು ತಕ್ಷಣ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz