ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ಸೊಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃತ್ತಕ್ಕೆ ಹಾನಿಯಾಗಿದ್ದು, ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ ಎನ್ನಲಾಗಿದೆ.
ಇಂದು ಮುಂಜಾನೆ ಮಂಜು ಮುಸುಕಿದ ವಾತಾವರಣದಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೇ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದೆ.
ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಇದೇ ಮೊದಲ ಬಾರಿ ಭಾರೀ ಹಾನಿ ಸಂಭವಿಸಿದೆ. ಜೊತೆಗೆ ಕೆಎಸ್ ಆರ್ ಟಿಸಿ ಬಸ್ ಕೂಡ ಜಖಂಗೊಂಡಿದೆ.
ವರದಿ: ಮಂಜು, ಶ್ರವಣೂರು


