ತುಮಕೂರು: ಬೈಕ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.
ತಿಪಟೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್, ವೇಗವಾಗಿ ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಶೆಟ್ಟಿಕೆರೆ ಗ್ರಾಮದ ಅವಿನಾಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx