ತುಮಕೂರು: ಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕನಿಗೆ ಕಾಲು ಮುರಿತ, ಬಸ್ ಚಾಲಕ ಹಾಗೂ ಗರ್ಭಿಣಿ ಸೇರಿದಂತೆ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಹೊಸದುರ್ಗ ಕಡೆಗೆ ತೆರಳುತ್ತಿದ್ದ KSRTC ಬಸ್ ಆಗಿದೆ.
ನಂದಿಹಳ್ಳಿ ಬಳಿ ಕಂಟೈನರ್ ಲಾರಿ ಸಡನ್ ಬ್ರೇಕ್ ಹೊಡೆದ ಪರಿಣಾಮ ಕಂಟೈನರ್ ಲಾರಿಗೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ರಭಸಕ್ಕೆ KSRTC ಬಸ್ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4