ಬಳ್ಳಾರಿ: ಕೆಎಸ್ ಆರ್ ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಶ್ವೇತಾ (38) ಮತ್ತು ಬಾಲನಾಯಕ್ (42) ಎಂದು ಗುರುತಿಸಲಾಗಿದೆ. ಇತರ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಘಟನೆಯ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಾತ್ರಿ 11:30ರ ಸುಮಾರಿಗೆ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಹೊಡೆದಿದೆ.
ಅಪಘಾತದ ಸ್ಥಳಕ್ಕೆ ಸಿರಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC