ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಲ್ಲ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದ ವೇಳೆ ಕೆಆರ್ ಪೇಟೆ ತಾಲೂಕಿನ ಕುಂದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿಯಾಗಿದೆ.
ಪ್ರಯಾಣಿಕರ ಪೈಕಿ ಹೆಚ್ಚು ಶಾಲಾ–ಕಾಲೇಜಿನ ವಿದ್ಯಾರ್ಥಿಗಳೇ ಇದ್ದು, ಹಲವರ ಕೈ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4